ಸಬ್‌ಕಾ ಸಾಥ್ ಸಬ್ ಕಾ ವಿಕಾಸ್ ನೊಂದಿಗೆ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಆಯ್ಕೆ ಮಾಡುವಲ್ಲಿ ನನ್ನಂತ ಸಾಮಾನ್ಯ ಕಾರ್ಯಕರ್ತನಿಗೆ ಹಿರಿಯರು ಜವಾಬ್ದಾರಿ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ದಕ್ಷಿಣ ಕನ್ನಡ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಗೊಂಡ ಬಳಿಕ ಮೊದಲ ಬಾರಿಗೆ ಮಾ.24 ರಂದು ಬೆಳ್ತಂಗಡಿ ತಾಲೂಕಿನ ವಿವಿದೆಡೆ ಪ್ರವಾಸ ಕೈಗೊಂಡ ಸಂದರ್ಭ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಕುವೆಟ್ಟು-ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.
ವಿಶ್ವದ ಅತ್ಯಂದ ದೊಡ್ಡ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿಯನ್ನು ಮುನ್ನಡೆಸುತ್ತಿರುವ ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಮಗೆಲ್ಲ ಗ್ಯಾರೆಂಟಿ. ದುರ್ಬಲ ಆರ್ಥಿಕತೆಯಲ್ಲಿದ್ದ ಭಾರತವನ್ನು ಇಂದು ವಿಶ್ವದಲ್ಲಿ ೫ನೇ ಸ್ಥಾನಕ್ಕೇರಿಸಿದ್ದಾರೆ. ಮುಂಬರುವ ದಿನಗಳಲ್ಲಿ ವಿಶ್ವದಲ್ಲಿ ಭಾರತ ಪ್ರಬಲ ಆರ್ಥಿಕ ಶಕ್ತಿಯಾಗಿಸುವಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಆರಿಸೋಣ ಎಂದರು.
ತುಳುನಾಡಿನ ದೈವ ದೇವರ ಆಶೀರ್ವಾದದೊಂದಿಗೆ ಕಾರ್ಯಕರ್ತರ ಪ್ರಾರ್ಥನೆ, ಹಾರೈಕೆಯೇ ನಮಗೆ ಶಕ್ತಿಯಾಗಿದೆ. ವಿಕಸಿತ ಭಾರತಕ್ಕಾಗಿ 400 ಸ್ಥಾನಮಾನ ಗೆಲ್ಲುವಲ್ಲಿ ಕಾರ್ಯರ್ತರು ವಿರಮಿಸದೆ ಶ್ರಮಿಸೋಣ ಎಂದು ಕರೆ ನೀಡಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಆಯ್ಕೆ ಮಾಡುವಲ್ಲಿ ಬೆಳ್ತಂಗಡಿ ಬೂತ್ ಮಟ್ಟದಿಂದ ಸಂಕಲ್ಪ ಆರಂಭಗೊಂಡಿದೆ. ಇದು ಇತಿಹಾಸ ಪುಟದಲ್ಲಿ ಅಜರಾಮರಗೊಳಿಸುವ ಕಾಲಘಟ್ಟವಾಗಿದೆ. ಕ್ಯಾಪ್ಟನ್ ಬ್ರಿಜೇಶ್ ಚೌಟರೋರ್ವ ಸೈನಿಕನಾದ್ದರಿಂದ ಈ ದೇಶದ ಬದ್ಧತೆಯನ್ನು ಅರಿತ ಪ್ರತಿಭಾನ್ವಿತರಾಗಿದ್ದಾರೆ. ಸುಳ್ಳು ಗ್ಯಾರೆಂಟಿಗಳ ಭರವಸೆಗಳ್ನು ನಂಬದೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ 60 ರಿಂದ 70 ಸಾವಿರ ಮತಗಳ ಅಂತರವನ್ನು ತರಿಸುವಲ್ಲಿ ಕಾರ್ಯರ್ತರು ಶ್ರಮಿಸೋಣ ಎಂದು ಹೇಳಿದರು.
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಸಭೆಗೂ ಮುನ್ನ ಶಾಸಕ ಹರೀಶ್ ಪೂಂಜ ಮನೆಗೆ ಭೇಟಿ ನೀಡಿದರು, ಬಳಿಕ ತಾಲೂಕಿನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರವರ ಮನೆ ಸಹಿತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ದರ್ಶನ, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಬಂಗಾಡಿ ಅರಮನೆ, ಹಿರಿಯರಾದ ಮೋಹನ್ ರಾವ್ ಕಲ್ಮಂಜರನ್ನು ಭೇಟಿ ಮಾಡಿದರು.
ತಾಲೂಕಿಗೆ ಭೇಟಿ ನೀಡಿದ ಸಂದರ್ಭ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬೆಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ್, ಅಲ್ಪಸಂಖ್ಯಾತ ಮೋರ್ಚ ರಾಜ್ಯ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸಾ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಜೆ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು, ವಸಂತಿ ಮಚ್ಚಿನ, ಮಂಡಲ ಪ್ರ.ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಸೇರಿದಂತೆ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ ಪದಾಧಿಕಾರಿಗಳು, ಬಿಜೆಪಿಯ ವಿವಿಧ ಮೋರ್ಚಾದ ಅಧ್ಯಕ್ಷರು, ಸಂಚಾಲಕರು, ಪದಾಧಿಕಾರಿಗಳ, ಪಕ್ಷದ ಪ್ರಮುಖರು ಉಪಸ್ಥಿರಿದ್ದರು.