Home ಕರಾವಳಿ ಮಂಗಳೂರು: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಮೇಯರ್ ಕವಿತಾ ಸನಿಲ್

0

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ (Kavita Sanil) ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.

ದೇಶಕ್ಕೆ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಇದಕ್ಕೂ ಮೊದಲು ನನ್ನ ರಾಜಕೀಯ ಗುರು ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಎಂದರು.

LEAVE A REPLY

Please enter your comment!
Please enter your name here