Home ಕರಾವಳಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಲಕ್ಷ ಮಂಜೂರು

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಲಕ್ಷ ಮಂಜೂರು

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ,ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಕುಡಿಯುವ ನೀರಿಗೆ ತೊಂದರೆಯಾಗಿರುವ ಬಗ್ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು ಪುತ್ತೂರಿಗೆ 50 ಲಕ್ಷ ಮಂಜೂರು ಮಾಡಿದ್ದು ದ ಕ ಜಿಲ್ಲೆಯ ಉಳಿದ ತಾಲೂಕುಗಳಿಗೂ ತುರ್ತು ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.


ಕುಡಿಯುವ ನೀರಿನ ಸಮಸ್ಯೆ ಉಂಟಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ,ಅಗತ್ಯ ಬಿದ್ದಲ್ಲಿ ಕೊಳವೆ ಬಾವಿ ತೆಗೆಯುವುದು ಸೇರಿದಂತೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆಯೋ ಅಲ್ಲೆಲ್ಲಾ ತುರ್ತಾಗಿ ವ್ಯವಸ್ಥೆ ಮಾಡಲಾಗುತ್ತದೆ.
ಮಳೆ ಇಲ್ಲದ ಕಾರಣ ಮಾಮೂಲಿಯಂತೆ ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಆಗಿದ್ದು ಇಲ್ಲಿಯ ತನಕ ನೀರು ಪೂರೈಕೆ ವ್ಯವಸ್ಥೆ ಮಾಡಲಾಗಿದೆ. ನೀರಿನ ತೀರಾ ಅಭಾವ ಇದ್ದಕಡೆಗಳಲ್ಲಿ ನೀರಿಗಾಗಿ ತುರ್ತು ವ್ಯವಸ್ಥೆ ಕೈಗೊಳ್ಳುವಂತೆ ಈಗಾಗಲೇ ಸಂಬಂದಿಸಿದ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರ‌ ಸೇರಿದಂತೆ ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ‌ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಮತ್ತು‌ನೀರಿನ‌ ಸಮಸ್ಯೆಗೆ‌ ತಕ್ಷಣ‌ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ತುರ್ತು ಅನುದಾನ ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ನೀರಿಲ್ಲದ ಬಗ್ಗೆ ಎಲ್ಲಿಂದ ಕರೆ ಬಂದರೂ ತಕ್ಷಣ ಸ್ಪಂದಿಸಿಬೇಕು‌ಎಂದು ಅಧಿಕಾರಿಗಳಿಗೆ ನಿರ್ಧೆಶನ ನೀಡಲಾಗಿದೆ. ಪುತ್ತೂರಿಗೆ 50 ಲಕ್ಷ ಅನುದಾನವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ,ಉಳಿದ ಕ್ಷೇತ್ರಗಳಿಗೂ ಅನುದಾನ ನೀಡಲಿದ್ದಾರೆ.

 

LEAVE A REPLY

Please enter your comment!
Please enter your name here