ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ 9 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು

Prakhara News
1 Min Read

ಸುಬ್ರಹ್ಮಣ್ಯ: ಕಳೆದ ಕೆಲವು ದಿನಗಳಿಂದ ತೀವ್ರ ಅಸೌಖ್ಯದಿಂದ ಬಳಲುತ್ತಿದ್ದ ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ, ಎಣ್ಮೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಿಶಿಲ್ (14) ಭಾನುವಾರ ರಾತ್ರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಯಕ್ಷಗಾನ ಹಾಗೂ ನಾಟಕ ರಂಗದಲ್ಲಿ ಅಪಾರ ಪ್ರತಿಭೆ ಹೊಂದಿದ್ದ ಬಾಲಕನೊಬ್ಬ ಇಷ್ಟು ಚಿಕ್ಕ ವಯಸ್ಸಿಗೆ ವಿಧಿವಶನಾಗಿರುವುದು ಇಡೀ ಗ್ರಾಮವನ್ನೇ ಕಣ್ಣೀರಲ್ಲಿ ಮುಳುಗಿಸಿದೆ.

ಕೆಲವು ದಿನಗಳಿಂದ ಅಸೌಖ್ಯದಿಂದ ಇದ್ದ ಶಿಶಿಲ್‌ನನ್ನು ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಿ ಜುಲೈ 6ರಂದು ಬೆಂಗಳೂರಿಗೆ ತೆರಳುವ ಬಗ್ಗೆ ತೀರ್ಮಾನಿಸಲಾಗಿತ್ತು.

ಜುಲೈ 5ರಂದು ರಾತ್ರಿ ತೀವ್ರ ಅಸೌಖ್ಯಕ್ಕೊಳಗಾಗಿದ್ದು, ರಾತ್ರಿಯೇ ಚಿಕಿತ್ಸೆಗೆಂದು ಪುತ್ತೂರಿಗೆ ಕರೆದೊಯ್ಯುವ ವೇಳೆ ಹೃದಯಾಘಾತ ಆಗಿದೆ ಎಂದು ತಿಳಿದು ಬಂದಿದೆ. ಶಿಶಿಲ್‌ಗೆ ತಂದೆ, ತಾಯಿ, ಸಹೋದರ ಇದ್ದಾರೆ. ಶಿಶಿಲ್ ಯಕ್ಷಗಾನ ಹಾಗೂ ನಾಟಕ ಕಲಾವಿದನೂ ಆಗಿದ್ದ.

Share This Article
Leave a Comment