BREAKING NEWS..! ಪುತ್ತೂರು: ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ್ ರೈ ಮಠಂತಬೆಟ್ಟು ನಿಧನ

Prakhara News
1 Min Read

ಪುತ್ತೂರು: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಜು.8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ತಾಲೂಕು ಕಚೇರಿಗೆ ಕೆಲಸದ ನಿಮಿತ್ತ ಆಗಮಿಸಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಿರಂಜನ ರೈ ಅವರು ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ಗುರುತಿಸಿಕೊಂಡಿದ್ದರು.

ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ಸರಳ ವ್ಯಕ್ತಿತ್ವ, ಜನಸ್ನೇಹಿ ನಡವಳಿಕೆ ಹಾಗೂ ಸಮಾಜಮುಖಿ ಕಾರ್ಯಗಳಿಂದ ಅಪಾರ ಜನಾನುರಾಗವನ್ನು ಗಳಿಸಿದ್ದರು.

Share This Article
Leave a Comment