Home ತಾಜಾ ಸುದ್ದಿ BREAKING: ಅಶ್ಲೀಲ ವೀಡಿಯೋ ಕೇಸ್: ಮತ್ತೆ 14 ದಿನ ‘ಪ್ರಜ್ವಲ್ ರೇವಣ್ಣ’ಗೆ ನ್ಯಾಯಾಂಗ ಬಂಧನ

BREAKING: ಅಶ್ಲೀಲ ವೀಡಿಯೋ ಕೇಸ್: ಮತ್ತೆ 14 ದಿನ ‘ಪ್ರಜ್ವಲ್ ರೇವಣ್ಣ’ಗೆ ನ್ಯಾಯಾಂಗ ಬಂಧನ

0

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.


ಇಂದು ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ಮತ್ತೆ 14 ದಿನಗಳ ಕಾಲ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರು ಎಸ್‌ಐಟಿ ಅಧಿಕಾರಿಗಳು ತನ್ನನ್ನು ಚೆನ್ನಾಗಿ ನೋಡಿಕೊಂಡಿಲ್ಲ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ತೋರಿಸಿಲ್ಲ ಎಂಬುದಾಗಿ ನ್ಯಾಯಾಧೀಶರ ಮುಂದೆ ಆರೋಪಿಸಿದ್ದಾಗಿ ಹೇಳಲಾಗುತ್ತಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here