ಶ್ರೀನಗರ : 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಶ್ರೀನಗರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದಾರೆ.
ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ, “ಯೋಗದ ಮೂಲಕ ನಾವು ಪಡೆಯುವ ಶಕ್ತಿಯನ್ನು ನಾವು ಶ್ರೀನಗರದಲ್ಲಿ ಅನುಭವಿಸಬಹುದು.
ಯೋಗ ದಿನದಂದು ನಾನು ದೇಶದ ಜನರಿಗೆ ಮತ್ತು ವಿಶ್ವದ ಮೂಲೆ ಮೂಲೆಯಲ್ಲಿ ಯೋಗ ಮಾಡುತ್ತಿರುವ ಜನರಿಗೆ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಅಂತಾರಾಷ್ಟ್ರೀಯ ಯೋಗ ದಿನವು 10 ವರ್ಷಗಳ ಐತಿಹಾಸಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. 2014ರಲ್ಲಿ ನಾನು ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರಸ್ತಾಪಿಸಿದ್ದೆ. ಭಾರತದ ಈ ಪ್ರಸ್ತಾಪವನ್ನು 177 ರಾಷ್ಟ್ರಗಳು ಬೆಂಬಲಿಸಿದವು ಮತ್ತು ಇದು ಸ್ವತಃ ಒಂದು ದಾಖಲೆಯಾಗಿದೆ. ಅಂದಿನಿಂದ, ಯೋಗ ದಿನವು ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.
ಯೋಗದ ಮಹತ್ವ ಮತ್ತು ಅದರ ಆರೋಗ್ಯ ಪ್ರಯೋಜನಗಳನ್ನು ಒತ್ತಿ ಹೇಳಿದ ಪ್ರಧಾನಿ, “ಯೋಗ ತನಗಾಗಿ ಮತ್ತು ಸಮಾಜಕ್ಕಾಗಿ. ಈ ವರ್ಷದ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’, ವೈಯಕ್ತಿಕ ಯೋಗಕ್ಷೇಮ ಮತ್ತು ಜಾಗತಿಕ ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಅಭ್ಯಾಸದ ಸಾಮರ್ಥ್ಯವನ್ನು ಒತ್ತಿಹೇಳುತ್ತದೆ.
ಮಾನಸಿಕ, ದೈಹಿಕ ಆರೋಗ್ಯದಲ್ಲಿ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಆಚರಣೆ ಮಾಡಲಾಗುತ್ತಿದೆ. ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಅಗತ್ಯವಾಗಿದೆ. ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ. ಆರೋಗ್ಯ, ಸಮಾಜ ಸ್ವಾಸ್ತ್ಯ ಕಾಪಾಡಲು ಯೋಗ ಅಗತ್ಯ ಎಂದು ಹೇಳಿದ್ದಾರೆ.