ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.


ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಯುವತಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು. ಹಾಗೆಯೇ, ಸಂತ್ರಸ್ತ ಯುವತಿ ಮತ್ತು ಆಕೆಯ ಕುಟುಂಬದ ಮೇಲೆ ದಾಖಲಿಸಲಾಗಿರುವ ಸುಳ್ಳು ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ ಪ್ರಮುಖರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೇಲ್, ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಕೃಷ್ಣಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಟಾಲಿ ಉಪಸ್ಥಿತರಿದ್ದರು.



