ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಮಿತಿ ಪದಾಧಿಕಾರಿಗಳ ಆಯ್ಕೆ

Prakhara News
1 Min Read

ವಿಟ್ಲ: ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು, ವಿಟ್ಲ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸಮಿತಿ ರಚನೆ ಹಾಗೂ ಮುಂದಿನ ಕಾರ್ಯಕ್ರಮದ ಬಗ್ಗೆ ಸಮಾಲೋಚನ ಸಭೆ ನಡೆಯಿತು.

ಬೆಳ್ಳಿ ಹಬ್ಬ ಸಮಿತಿಯ ಗೌರವಾಧ್ಯಕ್ಷರಾಗಿ ಲ ಮೋಹನ್ ಕಾಮಟ, ಅಧ್ಯಕ್ಷರಾಗಿ ವಿಶ್ವನಾಥ್ ನಾಯೊಟ್ಟು, ಉಪಾಧ್ಯಕ್ಷರಾಗಿ ದಯಾನಂದ ಬೋಡೋಣಿ ಹಾಗೂ ರವಿ ಅಂಚನ್‌, ಕಾರ್ಯದರ್ಶಿಯಾಗಿ ದಿನೇಶ್ ಕುಮಾರ್ ಮಾಡ್ತಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ ಅಂಚನ್, ಸಂಘಟನ ಕಾರ್ಯದರ್ಶಿಯಾಗಿ ಕರುಣಾಕರ ನಾಯೊಟ್ಟು, ಕೋಶಾಧಿಕಾರಿಯಾಗಿ ಧನಂಜಯ ನಾಯೊಟ್ಟು ರವರನ್ನು ಯುವಕ ಮಂಡಲದ ಅಧ್ಯಕ್ಷರಾದ ಪ್ರವೀಣ್ ರಾಜ್ ಕಾಮಟ ಘೋಷಿಸಿದರು. ಯುವಕ ಮಂಡಲದ ಕಾರ್ಯದರ್ಶಿ ನಿತಿನ್ ಬೊಡೋಣಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಪ್ರವೀಣ್‌ ನಡುವಡ್ಕ ವಂದಿಸಿದರು.

ಮುಂದಿನ ವರ್ಷ ಫೆಬ್ರವರಿಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಸಲುವಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಸೇರಿದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು.

Share This Article
Leave a Comment