Home ತಾಜಾ ಸುದ್ದಿ 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ- ಹೈಕೋರ್ಟ್

50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ- ಹೈಕೋರ್ಟ್

0

ಬೆಂಗಳೂರು: ಇನ್ನು ಮುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠವು 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಜೊತೆಗೆ ನಿಯಮಗಳಲ್ಲಿ ವರ್ಗಾವಣೆ ಮಾಡುವುದಕ್ಕೆ ವಿನಾಯಿತಿ ಇದ್ದಾಗ ಅವರು ಅರ್ಜಿ ಸಲ್ಲಿಸಲಿ ಅಥವಾ ಬಿಡಲಿ, ಆ ನಿಯಮವನ್ನು ಅಧಿಕಾರಿಗಳು ಜಾರಿಗೆ ತರಬೇಕು ಎಂದು ಹೇಳಿದೆ.

ಪೀಠವು ಮಹಿಳಾ ಶಿಕ್ಷಕರಾಗಿರುವ ಅರ್ಜಿದಾರರು 50 ವರ್ಷಗಳನ್ನು ದಾಟಿದ್ದಾರೆ ಮತ್ತು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ನಿಯಂತ್ರಣ) ಸೆಕ್ಷನ್ 10 (1) (vi) ಪ್ರಯೋಜನಕ್ಕೆ ಅರ್ಹರಾಗಿರುತ್ತಾರೆ. ಶಿಕ್ಷಕರ ವರ್ಗಾವಣೆ ಕಾಯಿದೆ, 2020 ಅಂತಹ ಶಿಕ್ಷಕರನ್ನು ಹೆಚ್ಚುವರಿ ಎಂದು ಘೋಷಿಸಲು ಸಾಧ್ಯವಿಲ್ಲ ಮತ್ತು ವರ್ಗಾವಣೆ ಆದೇಶ ಹೊರಡಿಸುವಂತಿಲ್ಲ. ಕಾಯ್ದೆಯ ಸೆಕ್ಷನ್ 10 (1) ಯ ಶಾಸನಬದ್ಧ ನಿಬಂಧನೆಯು ಉದ್ಯೋಗಿ ಶಿಕ್ಷಕರಿಗೆ ಆಡಳಿತ ಮತ್ತು ಪ್ರಯೋಜನವನ್ನು ಪಡೆಯುವ ಹಕ್ಕಾಗಿರುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here