ಸುರತ್ಕಲ್ : ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿ ; 6 ಮಂದಿ ಮೀನುಗಾರರ ರಕ್ಷಣೆ..!

Prakhara News
1 Min Read

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಸಮೀಪ ಸಮುದ್ರದ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿಯೊಂದು ಪಲ್ಟಿಯಾಗಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರು ಇದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಭಾರೀ ಅಲೆಗಳ ಹೊಡೆತಕ್ಕೆ ದೋಣಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ದೋಣಿ ಪಲ್ಟಿಯಾದ ಪರಿಣಾಮ ಎಲ್ಲಾ ಆರು ಮಂದಿ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಸಮುದ್ರದಲ್ಲಿ ಸಿಲುಕಿದ್ದ ಎಲ್ಲರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಮೀನುಗಾರರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದ್ದು, ಅವರ ಧೈರ್ಯ ಮತ್ತು ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share This Article
Leave a Comment