Home ತಾಜಾ ಸುದ್ದಿ ಇಂದು ಸಂಜೆ 5 ಗಂಟೆಗೆ ನಿಗಧಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದು

ಇಂದು ಸಂಜೆ 5 ಗಂಟೆಗೆ ನಿಗಧಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದು

0

ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

 

ಈ ನಡುವೆ ಇಂದು ಸಂಜೆ 5 ಗಂಟೆಗೆ ನಿಗಧಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ಇದೀಗ ವಿಶೇಷ ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ.

LEAVE A REPLY

Please enter your comment!
Please enter your name here