ವಿಟ್ಲ: ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್- ವ್ಯಕ್ತಿ ಅರೆಸ್ಟ್..!

Prakhara News
1 Min Read

ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ.

ಪ್ರಕರಣದ ವಿವರ:
ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಭರತ್ (36) ಎಂಬಾತ KFC KHANDIGA ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಹಾಗೂ ಸಾರ್ವಜನಿಕರಿಗೆ ಸಾರ್ವಜನಿಕ ನೆಮ್ಮದಿಗೆ ಭಂಗವುಟಾಗುವಂತಹ ಬರಹಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾನೆ. ಜೊತೆಗೆ ಇದೇ ಬರಹಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ಈ ಹಿನ್ನೆಲೆ ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಅ.ಕ್ರ: 160/2026 ಕಲಂ: 197(1)(a), 197(1)(c), 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತ ಭರತ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment