Home ಕರಾವಳಿ ಮೂಡುಬಿದಿರೆ : ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ

ಮೂಡುಬಿದಿರೆ : ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ

0

ಮೂಡುಬಿದಿರೆ : ಆತ ಒಬ್ಬ ಖತರ್ನಾಕ್‌ ಕ್ರಿಮಿನಲ್‌ ಆಗಿದ್ದು, ಆತನ ಮೇಲೆ ಹಲವು ಪೊಲೀಸ್ ಠಾಣೆಯಲ್ಲಿ 42 ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿತ್ತು. ಹಲವು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ವಾರೆಂಟ್ ಇದ್ರೂ ಆತ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್‌ ಆಗ್ತಾನೆ ಇದ್ದ. ಇತ್ತೀಚೆಗೆ ಆಗಸ್ಟ್‌ ತಿಂಗಳಲ್ಲಿ ಮೂಡುಬಿದ್ರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆತ ವೃದ್ಧ ಮಹಿಳೆಯರನ್ನು ಗುರಿಯಾಗಿಸಿ ಅವರ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ.

ಮೂಡಬಿದ್ರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ನಿರ್ಮಲಾ ಪಂಡಿತ್ ಎಂಬ 70 ವರ್ಷದ ವೃದ್ದೆಯ 24 ಗ್ರಾಂ ಚಿನ್ನದ ಸರ ಹಾಗೂ ಸೆಪ್ಟಂಬರ್ ತಿಂಗಳಲ್ಲಿ ಮಾರ್ನಾಡು ಗ್ರಾಮದ ಬಸದಿ ಬಳಿ 82 ವರ್ಷ ಪ್ರಾಯದ ಪ್ರೇಮಾ ಎಂಬ ವೃದ್ಧೆಯ 24 ಗ್ರಾಂ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ. ಈ ಎರಡೂ ಪ್ರಕರಣದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಈ ಕೃತ್ಯ ನಡೆಸಿದ ವಿಚಾರ ಪೊಲೀಸರ ಗಮನಕ್ಕೆ ಬಂದಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚಿದಾಗ ಇದು ಖತರ್ನಾಕ್‌ ಖದೀಮ ಚೆಂಬುಗುಡ್ಡೆಯ ಹಬೀಬ್‌ ಹಸನ್‌ ಕೃತ್ಯ ಎಂಬುದು ಗೊತ್ತಾಗಿದೆ. ಈತನ ಮೇಲೆ ವಿವಿಧ ಠಾಣೆಯಲ್ಲಿ 15 ಕ್ಕೂ ಹೆಚ್ಚು ಬಂಧನದ ವಾರೆಂಟ್ ಇದ್ರೂ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ. ಇದೀಗ ಮೂಡುಬಿದ್ರೆಯಲ್ಲಿ ಕೊ*ಲೆ ಆರೋಪಿ ಬಂಟ್ವಾಳದ ಉಮ್ಮರ್ ಸಿಯಾಫ್ ಎಂಬಾತನ ಜೊತೆ ಸೇರಿ ಸರ ಕಳ್ಳತನಕ್ಕೆ ಇಳಿದಿದ್ದ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಆರೋಪಿಗಳಿಂದ 2.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃ*ತ್ಯಕ್ಕೆ ಬಳಿಸಿದ್ದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here