ಉಡುಪಿ: ಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪ; ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಎಫ್‌ಐಆರ್..!

Prakhara News
1 Min Read

ಉಡುಪಿ : ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ (Hate Speech) ಮಾಡಿದ ಆರೋಪದ ಮೇಲೆ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ನೀಡಿದ ದೂರಿನ ಆಧಾರದ ಮೇಲೆ ಈ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಯಶ್‌ಪಾಲ್ ಸುವರ್ಣ ಅವರು, ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅಸಭ್ಯ ಹಾಗೂ ಅವಹೇಳನಕಾರಿ ಪದ ಬಳಕೆ ಮಾಡಿ ದ್ವೇಷ ಹರಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣ ದಾಖಲಾಗಿರುವುದನ್ನು ದೃಢಪಡಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಅವರು, “ದೂರಿನ ಆಧಾರದ ಮೇಲೆ ಶಾಸಕರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ತಿಳಿಸಿದ್ದಾರೆ.

Share This Article
Leave a Comment