ಈ ಬಗ್ಗೆ ಲೇಡಿಗೋಷನ್ ಅಧೀಕ್ಷಕ ಅವರು ಮಾಧ್ಯಮಗಳಿಗೆ ಅಂದೇ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಮಕ್ಕಳ ಕಣ್ಣಿನ ತಜ್ಞರ ಅಭಿಪ್ರಾಯ ಪಡೆಯಲು ನಿರ್ಧರಿಸಿ ಆಗಸ್ಟ್ 20ರಂದು ಬೆಳಗ್ಗೆ ಈ ಬಗ್ಗೆ ಮಗುವಿನ ಪೋಷಕರಿಗೆ ವಿಷಯ ತಿಳಿಸಿದ್ದು ಮಕ್ಕಳ ಕಣ್ಣಿನ ತಜ್ಞರು ಅಲ್ಟ್ರಾಸೌಂಡ್ ತಪಾಸಣೆ ನಡೆಸಿದಾಗ ಮಗುವಿನ ಕಣ್ಣು ಗುಡ್ಡೆ ಜನನದ ವೇಳೆಯೇ ಇಲ್ಲದಿರುವುದು ಕಂಡು ಬಂದಿದೆ. ಸಂಜೆ ಪೋಷಕರಿಗೆ ತಿಳಿಸಿದಾಗ ಅವರು ಆತಂಕಕ್ಕೊಳಗಾಗಿದ್ದಾರೆ. ಈ ವಿಷಯ ತಿಳಿಸಲು ವಿಳಂಬ ಮಾಡಲಾಗಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.
ಆಸ್ಪತ್ರೆಯಲ್ಲಿಹೆರಿಗೆಯಾದ ಬಳಿಕ ಜನಿಸಿದ ಮಗುವಿಗೆ ತೊಂದರೆ ಇಲ್ಲದಾಗ ತಾಯಿ ಜತೆ ಮಗುವಿನ ಫೋಟೋ ತೆಗೆಯುವ ವ್ಯವಸ್ಥೆಯೂ ಇದೆ. ತೊಂದರೆ ಇದ್ದು ಎನ್ಎಸ್ಯುಐಗೆ ಶಿಫ್ಟ್ ಮಾಡುವಾಗ ಅಲ್ಲಿಯೂ ಮಗುವಿಗೆ ಹೆರಿಗೆ ವೇಳೆ ಹಾಕಲಾಗುವ ಟ್ಯಾಗ್, ಕೇಸ್ ಶೀಟ್ ಇಟ್ಟು ಫೋಟೋ ನಮ್ಮ ಸಿಸ್ಟಮ್ಗಳಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಈ ಪ್ರಕರಣದಲ್ಲಿ ಈ ಎಲ್ಲಾ ದಾಖಲೆಗಳು ಇವೆ. ಅದಲ್ಲದೆ, ಹೆರಿಗೆ ರೂಂನಿಂದ ಉನ್ನತ ಚಿಕಿತ್ಸೆಗಾಗಿ ಎನ್ಎಸ್ಯುಐಗೆ ಶಿಫ್ಟ್ ಮಾಡುವ ವೇಳೆಯೂ ಸಿಸಿಟಿವಿ ಫೂಟೇಜ್ ದಾಖಲೆಯೂ ಆಸ್ಪತ್ರೆಯಲ್ಲಿದೆ. ಈ ಪ್ರಕರಣದಲ್ಲಿ ನಮ್ಮ ವೃತ್ತಿ ಧರ್ಮಕ್ಕೆ ಅಪಚಾರ ಆಗಿಲ್ಲ ಎಂದು ವರದಿಯಾಗಿತ್ತು. ಇದೀಗ ಸಂತ್ರಸ್ತೆಯ ಮಗುವಿನ ಡಿಎನ್ಎ ಪರೀಕ್ಷೆ ವರದಿ ಸಂಬಂಧ ಪಟ್ಟ ಇಲಾಖೆಯ ಕೈ ಸೇರಿದ್ದು, ಸಂತ್ರಸ್ತೆಯ ಹೆಣ್ಣು ಮಗು ಆಕೆಯದ್ದೇ, ಆಸ್ಪತ್ರೆಯಲ್ಲಿ ಅದಲು ಬದಲಾಗಿಲ್ಲ, ಆರೋಪಗಳು ನಿರಾಧಾರ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.