ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ – ಇಬ್ಬರು ದುರ್ಮರಣ, ಮೂವರು ಗಂಭೀರ..!

Prakhara News
1 Min Read

ಬೆಂಗಳೂರು: ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಥಾರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪವನ್ ಹಾಗೂ ದೀಪಕ್ ಮೃತರು. ಕಳೆದ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕೆರೆಯ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಗದ್ದೆಗೆ ಬಿದ್ದಿದೆ. ರಸ್ತೆಯಿಂದ ನಾಲ್ಕೈದು ಬಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತೀ ವೇಗದಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment