ಮಂಗಳೂರು ನಗರದಲ್ಲಿ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯನನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಈತ 2021ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಇತ್ತೀಚೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿಅಮಾನತು ಮಾಡಲಾಗಿದೆ ಎಂದು ದೇವಳದ ಕಾರ್ಯ ನಿರ್ವಹಣಾಧಿಕಾರಿಯವರು ಹೇಳಿದ್ದಾರೆ.