Home ಕರಾವಳಿ ಡಿ.10ರಿಂದ 6 ದಿನ ಆಳ್ವಾ ಸ್‌ ವಿರಾಸತ್‌

ಡಿ.10ರಿಂದ 6 ದಿನ ಆಳ್ವಾ ಸ್‌ ವಿರಾಸತ್‌

0

ಮಂಗಳೂರು: ಸಾಂಸ್ಕೃತಿಕ ಮನಸ್ಸುಗಳನ್ನು ಒಗ್ಗೂಡಿಸಿಕೊಂಡು, ಎಲ್ಲರಲ್ಲೂ ಸಾಂಸ್ಕೃತಿಕ ಉಲ್ಲಾಸ ಮೂಡಿಸುವ ಸದುದ್ದೇಶದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “ಆಳ್ವಾಸ್‌ ವಿರಾಸತ್‌’ 30ನೇ ವರ್ಷದ ಹೊಸ್ತಿಲಲ್ಲಿದ್ದು, ಸುಮನಸರ ಸ್ವಾಗತಕ್ಕಾಗಿ ವಿದ್ಯಾಗಿರಿ ಕ್ಯಾಂಪಸ್‌ ಸಜ್ಜಾಗುತ್ತಿದೆ. ಈ ವರ್ಷದ “ವಿರಾಸತ್‌’ ಸಂಭ್ರಮವು ಡಿ.10ರಿಂದ 15ರ ವರೆಗೆ ನಡೆಯಲಿದೆ.ಡಿ.10ರಿಂದ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಮುಖ್ಯ ಕಾರ್ಯ ಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಳಿದಂತೆ ಕೃಷಿ ಮೇಳ, ಆಹಾರ ಮೇಳ, ಕರಕುಶಲ ಮೇಳ, ಫಲಪುಷ್ಪ ಮೇಳ, ಚಿತ್ರಕಲಾ ಮೇಳ, ಕೈಮಗ್ಗ ಸೀರೆಗಳ ಪ್ರದರ್ಶನ ಮುಂತಾದ ವೈಶಿಷ್ಟéಪೂರ್ಣ ಮೇಳಗಳೂ ಇರಲಿವೆ.


ದೇಶದ ವಿವಿಧೆಡೆಗಳ ಖ್ಯಾತ ತಂಡ, ವ್ಯಕ್ತಿಗಳಿಂದ ನಡೆಯಲಿರುವ ಸಾಂಸ್ಕೃತಿಕ ಸಂಜೆಯು ಭರಪೂರ ಮನರಂಜನೆ ಒದಗಿಸಲಿದೆ. ಪಂಡಿತ್‌ ವೆಂಕಟೇಶ್‌ ಕುಮಾರ್‌ ಹಿಂದೂ ಸ್ಥಾನಿ ಗಾಯನಸಂಜೆ, ಒಸ್ಮಾನ್‌ ಮೀರ್‌ ಸಂಗೀತ ಲಹರಿ, ನೀಲಾದ್ರಿ ಕುಮಾರ್‌ ಅವರ ಸೌಂಡ್‌ ಆಫ್‌ ಇಂಡಿಯಾ, ಭರತ ನಾಟ್ಯ-ಒಡಿಸ್ಸಿ-ಕಥಕ್‌ ನೃತ್ಯ ಸಂಗಮ, ಸ್ಟೆಕೆಟೊ ಚೆನ್ನೈ ಅವರ ಸಂಗೀತ ಸಂಜೆ ಹೀಗೆ ಪ್ರತಿದಿನವೂ ಒಂದಿಲ್ಲೊಂದು ಆಕರ್ಷಣೆ ಇರಲಿದೆ.

LEAVE A REPLY

Please enter your comment!
Please enter your name here