Home ಉಡುಪಿ ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ..!

ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ..!

0

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ.


ನಾಪತ್ತೆಯಾದವರನ್ನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ಎಂದು ಗುರುತಿಸಲಾಗಿದೆ.

ಕಾಣೆಯಾದವರ ಚಹರೆ: ಲಕ್ಷಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here