ಉಡುಪಿ: ಸಾಯಿರಾಜ್ ಸೊಸೈಟಿಯ CEO ನೇಣು ಬಿಗಿದು ಆತ್ಮಹತ್ಯೆ..!

Prakhara News
0 Min Read

ಉಡುಪಿ: ಕಲ್ಪನಾ ಟಾಕೀಸ್ ಸಮೀಪ ಇರುವ ಸೊಸೈಟಿ ಒಂದರ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಚಿನ್ ಶೆಟ್ಟಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಚಿನ್ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇಂದು ಬೆಳಿಗ್ಗೆ ತಾವು ವಾಸವಿದ್ದ ಅಂಬಲಪಾಡಿ ಸಮೀಪದ ಫ್ಲಾಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.

Share This Article
Leave a Comment