
ಉತ್ತರ ಪ್ರದೇಶ: ಇಲ್ಲಿ ನಡೆಯುತ್ತಿರುವಂತ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಪುಣ್ಯ ಸ್ನಾನ ಮಾಡಿದ್ದಾರೆ.



ಇಂದು ಬೆಂಗಳೂರಿನಿಂದ ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.


ಅಲ್ಲಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಕುಂಭಮೇಳಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ತೆರಳಿದರು. ಆ ಬಳಿಕ ಗಂಗಾ ನದಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಪುಣ್ಯಸ್ನಾನ ಮಾಡಿದರು.