
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಗುದ್ದಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಪಂಚಾಯತ್ ಕಚೇರಿ ಬಳಿಯ ಪಾಡ್ಯರ್ ಎಂಬಲ್ಲಿ ನಡೆದಿದೆ.



ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕೊಂಪದವು ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಗುದ್ದಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.


ಗಾಯಗೊಂಡವರನ್ನು ಮೂಡಬಿದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.