BREAKING NEWS..! ಕರ್ನಾಟಕದಲ್ಲಿ ಒಂದು ವರ್ಷ ಗುಟ್ಕಾ, ಪಾನ್ ಮಸಾಲಾ ಸಂಪೂರ್ಣ ಬಂದ್..!

Prakhara News
1 Min Read

ಬೆಂಗಳೂರು : ಕರ್ನಾಟಕದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟಕ್ಕೆ ಸರ್ಕಾರ ಬ್ರೇಕ್ ಹಾಕಿದೆ.ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ಸಂಪೂರ್ಣ ನಿಷೇಧಿಸಲಾಗಿದೆ.

ಅಧಿಸೂಚನೆ ಹೊರಡಿಸಿದ ದಿನದಿಂದಲೇ ಈ ನಿಷೇಧ ಜಾರಿಗೆ ಬಂದಿದೆ. ಇನ್ನು ತಂಬಾಕು ಮತ್ತು ನಿಕೋಟಿನ್ ಅನ್ನು ಪ್ರತ್ಯೇಕ ಪ್ಯಾಕೆಟ್‌ಗಳಲ್ಲಿ ನೀಡಿ, ಗ್ರಾಹಕರು ಬಳಿಕ ಮಿಶ್ರಣ ಮಾಡಿಕೊಂಡು ಸೇವಿಸುವ ರೀತಿಯ ಉತ್ಪನ್ನಗಳಿಗೂ ನಿಷೇಧ ಅನ್ವಯವಾಗಲಿದೆ.

ಪ್ಯಾಕೆಟ್, ಸ್ಯಾಚೆಟ್ ಸೇರಿದಂತೆ ಯಾವುದೇ ರೂಪದಲ್ಲಿ ಇಂತಹ ಉತ್ಪನ್ನಗಳನ್ನು ಮಾರಾಟ ಮಾಡಿದರೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದ್ದು, ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Share This Article
Leave a Comment