Home ಕರಾವಳಿ ಮಂಗಳೂರು: ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

0

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಫೆ. 14ರಂದು ಮಧ್ಯಾಹ್ನ12 ರಿಂದ 2 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.

ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯೂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here