
ಉಡುಪಿ: ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ವಾದ್ಯ ಕಲಾವಿದನೊರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ನಡೆದಿದೆ.



ಮೃತರನ್ನು ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ಅಶ್ವಥ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ತಿಳಿದುಬಂದಿಲ್ಲ. ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸುನಿಲ್ ಬೈಲಕೆರೆ ಅವರ ಸಹಾಯದಿಂದ ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ನಗರ ಪೋಲಿಸ್ ಠಾಣೆಯ ಎ. ಎಸ್. ಐ ಸುಭಾಸ್ ಕಾಮತ್, ಹೆಡ್ ಕಾನ್ಸಟೇಬಲ್ ಹರೀಶ್ ಮಾಳ, ಜಯಕರ್ ಕಾನೂನು ಪ್ರಕ್ರಿಯೆ ನಡೆಸಿದರು. ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

