
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಮಾರ್ಚ್ 1 ರಿಂದ ಶುರುವಾಗಿ ಮಾರ್ಚ್ 20 ರಂದು ಪರೀಕ್ಷೆಗಳು ಕೊನೆಗೊಳ್ಳಲಿವೆ.
ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು.
ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ, ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಸಿಸಿ ಕ್ಯಾಮೆರಾ ಕಡ್ಡಾಯ
ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ.


