Home ಕರಾವಳಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಎನ್.ಎಸ್.ಯು.ಐ ದ.ಕ.ಜಿಲ್ಲಾ ಸಮಿತಿ ಆಗ್ರಹ

ವಿದ್ಯಾರ್ಥಿ ದಿಗಂತ್ ಪತ್ತೆಗೆ ಎನ್.ಎಸ್.ಯು.ಐ ದ.ಕ.ಜಿಲ್ಲಾ ಸಮಿತಿ ಆಗ್ರಹ

0

ಮಂಗಳೂರು: ಪೊಲೀಸ್ ಇಲಾಖೆ ದಿಗಂತ್ ನಾಪತ್ತೆ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸಿ ಪತ್ತೆ ಹಚ್ಚಬೇಕು ಹಾಗೂ ಸಮಾಜದ ಸ್ವಾಸ್ಥ್ಯಕ್ಕಾಗಿ ಕೋಮು ಪ್ರಚೋದನೆಗೆ ಅವಕಾಶ ನೀಡದಂತೆ ಕ್ರಮ ವಹಿಸಬೇಕು ಎಂದು ಎನ್.ಎಸ್.ಯು.ಐ ದ.ಕ.ಜಿಲ್ಲಾ ಸಮಿತಿ ಆಗ್ರಹಿಸಿದೆ.

ದಿಗಂತ್ ನಾಪತ್ತೆಯಾಗಿ ಈವರೆಗೆ ಸುಳಿವು ಸಿಗದ ಹಿನ್ನೆಲೆಯಲ್ಲಿ ಆತನ ಕುಟುಂಬ ಮತ್ತು ಗ್ರಾಮಸ್ಥರಲ್ಲಿ ಆತಂಕ ಮಡುಗಟ್ಟಿದೆ. ಸದ್ಯ ಲಭ್ಯವಿರುವ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿ ಗೊಂದಲ ಮತ್ತು ಆತಂಕ ನಿವಾರಿಸಬೇಕು. ಸತ್ಯಕ್ಕೆ ದೂರವಾದ ಆರೋಪಗಳು ಕೇಳಿಬರುತ್ತಿದ್ದು, ಇದು ಸಮಾಜದ ಸಾಮರಸ್ಯಕ್ಕೆ ದಕ್ಕೆಯುಂಟುಮಾಡುತ್ತಿದ್ದೆ. ಆದುದರಿಂದ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಪಾರದರ್ಶಕ ತನಿಖೆ ನಡೆಸಬೇಕು. ಆ ಮೂಲಕ ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರು ಪೊಲೀಸ್ ಇಲಾಖೆಯ ಮೇಲಿಟ್ಟ ನಂಬಿಕೆಯನ್ನು ಉಳಿಸಬೇಕು ಎಂದು ಎನ್.ಎಸ್.ಯು.ಐ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here