ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್-ಬೈಕ್ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ದುರಂತ ಅಂತ್ಯ..!

Prakhara News
1 Min Read

ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಶನಿವಾರ (ಆಗಸ್ಟ್ 15) ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಡಾವು ಕೊಯಿಲ ಕಡೆಯಿಂದ ಸವಣೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಭೀಕರ ಅಪಘಾತದ ರಭಸಕ್ಕೆ ಬೈಕ್ ಸವಾರ ಅಭಿಲಾಷ್ ಎಂಬುವವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share This Article
Leave a Comment