
ರಾಜ್ಯದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮ್ಮ ಹೆತ್ತವರನ್ನು ನಿರ್ಲಕ್ಷಿಸಿ, ಅವಮಾನಿಸುವ ಅಥವಾ ಬೀದಿಗೆ ತಳ್ಳುವ ಘಟನೆಗಳು ಹೆಚ್ಚುತ್ತಿವೆ. ಇಂತಹ ದುರ್ಘಟನೆಗಳನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಹೊಸ ಕಾನೂನನ್ನು ಜಾರಿಗೊಳಿಸಿದೆ.



ವಿಧಾನ ಪರಿಷತ್ತಿನಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರ ಗೌಡ ಅವರು, 2007ರ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಉಲ್ಲೇಖಿಸಿ ಮಾಹಿತಿ ನೀಡಿದರು.


ಈ ಕಾಯ್ದೆಯ ಪ್ರಕಾರ, ತಂದೆ-ತಾಯಿ ಅಥವಾ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅವರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಪಡಿಸಿ ಆಸ್ತಿಯನ್ನು ಮರಳಿ ಪೋಷಕರ ಹೆಸರಿಗೆ ಮರುಸ್ಥಾಪಿಸಲು ಅವಕಾಶವಿದೆ. ಈ ಪ್ರಕ್ರಿಯೆಯನ್ನು ಸಂಬಂಧಪಟ್ಟ ಉಪ ವಿಭಾಗಾಧಿಕಾರಿಗಳು ಕೈಗೊಳ್ಳಬೇಕೆಂದು ಕಾನೂನಿನಲ್ಲಿ ಸ್ಪಷ್ಟಿಸಲಾಗಿದೆ.
ಮಕ್ಕಳು ಅಥವಾ ಸಂಬಂಧಿಕರು ಹಿರಿಯರ ಆರೈಕೆಗೆ ನಿರ್ಲಕ್ಷ್ಯ ವಹಿಸಿದರೆ, ಹಿರಿಯರು ಸೆಕ್ಷನ್ 09ರ ಅಡಿಯಲ್ಲಿ ದೂರು ಸಲ್ಲಿಸಬಹುದಾಗಿದೆ. ದೂರು ಸಾಬೀತಾದರೆ, ಸೆಕ್ಷನ್ 23ರ ಅಡಿಯಲ್ಲಿ ಆಸ್ತಿಯನ್ನು ಪೋಷಕರ ಹೆಸರಿಗೆ ಮರಳಿ ಮಾಡುವುದು ಕಾನೂನಿನ ಅಡಿಯಲ್ಲಿ ಸಾಧ್ಯವಾಗುತ್ತದೆ.
ಸಚಿವರು ಈ ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸದನಕ್ಕೆ ಮಾಹಿತಿ ನೀಡಿದರು.