‘ಸಾಧಕಶ್ರೇಷ್ಠ ಪ್ರಶಸ್ತಿ’ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ

Prakhara News
1 Min Read

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ‘ಸ್ನೇಹ ತರಂಗ’ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮವು ಕಾಸರಗೋಡಿನ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರಕ್ಕೆ ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ಅಶೋಕ ಯಂಕಪ್ಪ ಚಂದರಗಿ, ಕಾಸರಗೋಡು ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ರಾಷ್ಟ್ರೀಯ ಪ್ರಶಸ್ತಿ ವಿಜೇತ ಶ್ರೇಷ್ಠ ಪೋಷಕ ನಟಿ ಕು. ರೂಪಶ್ರೀ ವರ್ಕಾಡಿ, ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ–2026 ಪುರಸ್ಕೃತ ಶಾಫಿ ಬಂಡಸಾಲೆ, ಟಿ. ಶಂಕರ ನಾರಾಯಣ ಭಟ್ ,ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, KUWJ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ರಾಜ್ಯ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಕೋಶಾಧಿಕಾರಿಗಳಾದ ಅಜಿತ್ ಸ್ವರ್ಗ ಹಾಗೂ ಶ್ರೀಕಾಂತ್ ನೆಟ್ಟಣಿಗೆ ಸೇರಿದಂತೆ ಹಲವರು ಭಾಗವಹಿಸಿದ್ದರು.

Share This Article
Leave a Comment