ಆಗಸ್ಟ್ 31ರಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆಯಿಂದ ಪುತ್ತೂರು ಚಲೋ ಆಂದೋಲನ..!

Prakhara News
1 Min Read

ಪುತ್ತೂರು : ಪುತ್ತೂರಿನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಸ್ವಾಭಿಮಾನಿ ಹಿಂದೂ ಸಮಾಜದ ಜಾಗೃತಿಗಾಗಿ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಆ.31ರಂದು ಪುತ್ತೂರು ಚಲೋ- ಜನಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಚಾರ ಪ್ರಸಾರ ಸಹ ಪ್ರಮುಖ್ ಪ್ರದೀಪ್ ಸರಿಪಲ್ಲ ತಿಳಿಸಿದ್ದಾರೆ.

ಶುಕ್ರವಾರ ನಗರದ ವಿಎಚ್ ಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯಲ್ಲಿ ಜೆರಾಕ್ಸ್ ಅಂಗಡಿಯ ಮಾಲಕರಾದ ಸದಾಶಿವ ಪೈ, ಅಂಜನಾ ಪೈ ಮತ್ತು ಸುದರ್ಶನ್ ಪೈ ಅವರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿರುವುದು ದುರುದ್ದೇಶದಿಂದ ಕೂಡಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು.

ಅಶಾಂತಿಗೆ ಕಾರಣರಾದ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರು ಎಂದು ಹೇಳಲಾಗುತ್ತಿರುವ ನಿಯಾಜ್ ಮತ್ತು ನೌಷಾದ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಸಂಘಟಿತ ಅಪರಾಧ ಪ್ರಕರಣ ಕಾಯ್ದೆಯಡಿ ಕೇಸು ದಾಖಲಿಸಿತನಿಖೆ ನಡೆಸಬೇಕು. ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Share This Article
Leave a Comment