ಪುತ್ತೂರು: ಪ್ರೆಸ್ ಕ್ಲಬ್ ಎದುರುಗಡೆ ಗಲಾಟೆ – ಮೂವರ ವಿರುದ್ಧ ಪ್ರಕರಣ ದಾಖಲು..!

Prakhara News
1 Min Read

ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್‌ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು ಗಲಾಟೆ ನಡೆಸುತ್ತಿದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.

ಪೊಲೀಸರು ಸ್ಥಳದಲ್ಲಿದ್ದವರಿಗೆ ತಿಳುವಳಿಕೆ ನೀಡಿ ಗಲಾಟೆ ನಿಲ್ಲಿಸುವಂತೆ ಸೂಚಿಸಿದರೂ, ಅವರು ಕಲಹ ಮುಂದುವರಿಸಿದರೆಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್‌ ಆಚಾರ್ಯ, ಕೂರ್ನಡ್ಕದ ರವೂಫ್ ಹಾಗೂ ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ. 104/2026, ಕಲಂ 194(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment