ಮಂಗಳೂರು : ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದಿದೆ ಎನ್ನಲಾದ ಅವಮಾನಕರ ‘ಶುದ್ಧೀಕರಣ’ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ. ಇದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ದಲಿತ ವಿರೋಧಿ ನೀತಿಯ ಪರಮಾವಧಿ.


ದೇಶದ ಹಿರಿಯ ರಾಜಕಾರಣಿ ಹಾಗೂ ಶೋಷಿತ ಸಮುದಾಯದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಶುದ್ಧೀಕರಣ’ದ ಹೆಸರಿನಲ್ಲಿ ನೇರವಾಗಿ ಅಪಮಾನ ಮಾಡಲಾಗಿದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ನ್ಯಾಯ ಕೇಳಿದ್ದೇ ರಾಹುಲ್ ಗಾಂಧಿ ಮಾಡಿದ ತಪ್ಪೇ? ಅವಮಾನಕರ ಕೃತ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಬದಲು, ಶೋಷಿತ ಸಮುದಾಯದ ಪರವಾಗಿ ನಿಂತು ಸರ್ಕಾರದ ವೈಫಲ್ಯವನ್ನು ಬಯಲಿಗೆಳೆದ ರಾಹುಲ್ ಗಾಂಧಿ ಅವರ ಮೇಲೆಯೇ ದುರುದ್ದೇಶಪೂರಿತವಾಗಿ ಪ್ರಕರಣ ದಾಖಲಿಸಲಾಗಿದೆ. ಸಾಂವಿಧಾನಿಕ ಸ್ಥಾನದಲ್ಲಿರುವ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಅಡಗಿಸಲು ಬಿಜೆಪಿ ಸರ್ಕಾರ ಅಧಿಕಾರ ಹಾಗೂ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.
ಇಂತಹ ಸುಳ್ಳು ಪ್ರಕರಣಗಳು ಮತ್ತು ಬೆದರಿಕೆಗಳಿಗೆ ಕಾಂಗ್ರೆಸ್ ಪಕ್ಷವಾಗಲಿ, ರಾಹುಲ್ ಗಾಂಧಿ ಅವರಾಗಲಿ ಮಣಿಯುವುದಿಲ್ಲ. ದಲಿತರು ಮತ್ತು ಸಾಮಾಜಿಕ ನ್ಯಾಯದ ಪರವಾದ ಈ ಹೋರಾಟವನ್ನು ಸಂಸತ್ತಿನಿಂದ ಹಿಡಿದು ಬೀದಿಮಟ್ಟದವರೆಗೆ ಇನ್ನಷ್ಟು ತೀವ್ರಗೊಳಿಸಲಾಗುವುದು…


