ಮಂಗಳೂರು : ಮಹಿಳೆಯರ ಹಕ್ಕು, ಗೌರವ, ಸಮಾನತೆ ಹಾಗೂ ಸಬಲೀಕರಣದ ಸಂದೇಶವನ್ನು ಸಾರುವ ‘ರೈಸ್ ಅಂಡ್ ರಿಕ್ಲೈಮ್’ ಮಹಿಳಾ ಸಮಾವೇಶವು ಇಂದು ಮಂಗಳೂರಿನ ಪುರಭವನದಲ್ಲಿ ಯಶಸ್ವಿಯಾಗಿ ನಡೆಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ (WIM), ಮಂಗಳೂರು ನಗರ ಜಿಲ್ಲೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಮಹಿಳಾ ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದರು.


ಕಾರ್ಯಕ್ರಮವನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಉದ್ಘಾಟಿಸಿದರು. ಸಮಾವೇಶದಲ್ಲಿ ಕರ್ನಾಟಕದ ಮಾಜಿ ಸಚಿವರಾದ ಬಿ.ಟಿ. ಲಲಿತಾ ನಾಯಕ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಮತಾ ಯಜಮಾನ್, ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಅಡ್ವ. ಹಿನಾ ಐಜಾಝ್, ಅಡ್ವ. ಹರ್ಷಿತಾ ಜೆ.ಕೆ., ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಹಾಗೂ ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆ ಮಿಸ್ರಿಯಾ ಕಣ್ಣೂರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಮಾತನಾಡಿದರು.
ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ, ಹಕ್ಕುಗಳ ನಿರಾಕರಣೆ, ಸಾಮಾಜಿಕ ಅಸಮಾನತೆ ಹಾಗೂ ಮಹಿಳಾ ಸಬಲೀಕರಣದ ಅಗತ್ಯತೆಯ ಕುರಿತು ಸಮಾವೇಶದಲ್ಲಿ ವಿಚಾರ ವಿನಿಮಯ ನಡೆಯಿತು. ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವುದರ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮುನ್ನಡೆಯಬೇಕೆಂಬ ಸಂದೇಶವನ್ನು ಗಣ್ಯರು ನೀಡಿದರು.


ಕಾರ್ಯಕ್ರಮದ ಆರಂಭದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಸಾಮಿಯಾ, ಆಶಿಕಾ ಮತ್ತು ಶಾಫಿನ್ ಅವರಿಂದ ಕ್ರಾಂತಿಗೀತೆ ಪ್ರಸ್ತುತಪಡಿಸಲಾಯಿತು. ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ ಸ್ವಾಗತಿಸಿದರು. ಮಿಸ್ರಿಯಾ ಕಣ್ಣೂರು ಪ್ರಸ್ತಾವಿಕ ಭಾಷಣ ಮಾಡಿದರು.

ಸಮಾವೇಶದ ಸಂದರ್ಭದಲ್ಲಿ ಕ್ಷೇತ್ರ ಸಮಿತಿಗಳ ಪರಿಚಯ ಹಾಗೂ ಮಂಗಳೂರು ನಗರ ಜಿಲ್ಲಾ WIM ಸಮಿತಿಯ ಘೋಷಣೆ ನಡೆಯಿತು. ಮಹಿಳಾ ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಕೈಗೊಳ್ಳಬೇಕಾದ ಹೋರಾಟಗಳ ಕುರಿತು ನಿರ್ಣಯಗಳನ್ನು ಮಂಡಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಮುಖ್ಯ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷೆ ಆಯಿಷಾ ಯಾಸ್ಮಿನ್ ಸಮಾರೋಪ ಭಾಷಣ ಮಾಡಿದರು. ಮಿನಾಝ್ ಮುಲ್ಕಿ, ಪ್ರಧಾನ ಕಾರ್ಯದರ್ಶಿ, WIM ಮಂಗಳೂರು ನಗರ ಜಿಲ್ಲೆ, ಧನ್ಯವಾದ ಅರ್ಪಿಸಿದರು.
“ಮಹಿಳೆಯರ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು, ಹಕ್ಕುಗಳಿಗಾಗಿ ಸಂಘಟಿತ ಹೋರಾಟ ನಡೆಯಬೇಕು ಹಾಗೂ ಮಹಿಳೆಯರು ತಮ್ಮ ನ್ಯಾಯಯುತ ಸ್ಥಾನವನ್ನು ಮರಳಿ ಪಡೆಯಬೇಕು” ಎಂಬ ಆಶಯದೊಂದಿಗೆ ‘ರೈಸ್ ಅಂಡ್ ರಿಕ್ಲೈಮ್’ ಮಹಿಳಾ ಸಮಾವೇಶ ಯಶಸ್ವಿಯಾಗಿ ಮುಕ್ತಾಯಗೊಂಡಿತು.

