ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.


ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿ ಪ್ರಕಟಿಸಲಾಗಿದೆ. ಸೆ.9, 2026ರಿಂದಲೇ ನೇಮಕಾತಿಗಳು ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಆರ್. ಪೂಜಾರಿ ಅವರ ಹೆಸರನ್ನು ಪಟ್ಟಿಯಲ್ಲಿ ನಮೂದಿಸಲಾಗಿದೆ.




