ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ..!

Prakhara News
0 Min Read

ಮಂಗಳೂರು: ನಗರದಲ್ಲಿ ಕ್ಯಾಬಿನೇಟ್ ಸಭೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿದ ಘಟನೆ ಕ್ಲಾಕ್ ಟವರ್ ಬಳಿ ನಡೆದಿದೆ.

ಕೊಳ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ವಿರೋಧಿಸಿ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿದೆ.ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಮತ್ತು ರಾಜ್ಯದ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ .

Share This Article
Leave a Comment