ಮಂಗಳೂರು ದಕ್ಕೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Prakhara News
1 Min Read

ಮಂಗಳೂರು : ಮಂಗಳೂರಿನಲ್ಲಿ ನಿನ್ನೆ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯ ಬಳಿಕ, ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಬಂದರಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ತದನಂತರ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು.ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿಯಿಂದ ಹಿಡಿದು ಮೂಲಸೌಕರ್ಯ, ಪ್ರವಾಸೋದ್ಯಮ ಹಾಗೂ ‘ಬ್ಲೂ ಎಕಾನಮಿ’ವರೆಗೆ ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Share This Article
Leave a Comment