ಉಪ್ಪಿನಂಗಡಿ : ಕೌಟುಂಬಿಕ ಕಲಹಕ್ಕೆ ಇಬ್ಬರು ಪುಟಾಣಿ ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಒಂದು ಮಗು ಸಾವು..!

Prakhara News
1 Min Read

ಉಪ್ಪಿನಂಗಡಿ : ಗಂಡನೊಂದಿಗಿನ ಕೌಟುಂಬಿಕ ಕಲಹದಿಂದ ಆಕ್ರೋಶಗೊಂಡ ಮಹಿಳೆಯೊಬ್ಬಳು ಇಬ್ಬರು ಎಳೆಯ ಮಕ್ಕಳನ್ನು ಬಾವಿಗೆ ಎಸೆದ ಘೋರ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ತಂಗಿಯ ಮಗು (ರಬೀಹ್ – 2) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಪೆರ್ನೆ ನಿವಾಸಿ ಸಿನಾನ್ (32) ಹಾಗೂ ಆತನ ಪತ್ನಿ ನೂರುನ್ನಿಸಾ (28) ನಡುವೆ ಫೋನ್ ಕರೆಯಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಜಗಳ ನಡೆದಿದೆ. ಈ ವೇಳೆ ತೀವ್ರ ಕೋಪಗೊಂಡ ಪತ್ನಿ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರೂವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಮಗುವನ್ನು ಕರೆದೊಯ್ದು ಮನೆಯ ಸಮೀಪದ ಬಾವಿಗೆ ಎಸೆದಿದ್ದಾಳೆ.

ಘಟನೆ ತಿಳಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಬಾವಿಗಿಳಿದು ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಪತಿಯ ತಂಗಿಯ ಮಗು ಜೀವಚೆಲ್ಲಿತ್ತು. ಆರೋಪಿತೆಯ ಸ್ವಂತ ಮಗುವಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ರವಾನಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (ಅ.ಕ್ರಂ 121/2026) ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಿದ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Share This Article
Leave a Comment