ಬಂಟ್ವಾಳ: ಪೋಕ್ಸೋ ಪ್ರಕರಣ-ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

Prakhara News
1 Min Read
Oplus_0

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದೆ.

ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ FTSC-2ರಲ್ಲಿ ನಡೆಯಿತು. ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಸೆಪ್ಟೆಂಬರ್ 19, 2026ರಂದು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80,000 ದಂಡ ವಿಧಿಸಿ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Share This Article
Leave a Comment