ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ
ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ.


ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಕಾರು ಹಾಗೂ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಸ್ಥಳೀಯರು ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಗಾಯಾಳುಗಳ ಸ್ಥಿತಿ ಹಾಗೂ ಅಪಘಾತಕ್ಕೆ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.


