ರಾಜ್ಯ ಸರ್ಕಾರಕ್ಕೆ ವಂದೇಮಾತರಂ ವಿಷಯದಲ್ಲಿ ರಾಜ್ಯಪಾಲರ ಸೂಚನೆ ಸ್ವಾಗತಾರ್ಹ: ಶಾಸಕ ವೇದವ್ಯಾಸ್ ಕಾಮತ್

Prakhara News
1 Min Read

ಮಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಅನ್ನು ಎರಡು ಚರಣಗಳಿಗೆ ಮಾತ್ರ ಸೀಮಿತಗೊಳಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಕ್ಷೇಪ ವ್ಯಕ್ತಪಡಿಸಿ ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿರುವುದು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು.

ವಂದೇ ಮಾತರಂ ನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿ, ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲ್ಲದೇ 1971ರ ಕಾಯ್ದೆಯ ಸೆಕ್ಷನ್ 3ರ ಅಡಿ ರಾಷ್ಟ್ರಗೀತೆಗೆ ನೀಡಲಾಗಿರುವ ರಕ್ಷಣೆಯನ್ನೂ ನೀಡಲಾಗಿದೆ. ರಾಜ್ಯ ಸರ್ಕಾರಗಳು ಈ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು ಹೊರತು ಮಾರ್ಪಾಡುಗೊಳಿಸಲು ಅವಕಾಶವಿಲ್ಲ ಎಂದು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿರುವುದು ರಾಜ್ಯ ಸರ್ಕಾರಕ್ಕೆ ಬೀಸಿದ ಚಾಟಿಯಾಗಿದೆ ಎಂದರು.

ವಂದೇ ಮಾತರಂ ನಮ್ಮ ರಾಷ್ಟ್ರೀಯ ಗೀತೆ. ಅದರ ಗೌರವ ಮತ್ತು ನಿಗದಿತ ಶಿಷ್ಟಾಚಾರವನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಅದರಲ್ಲಿಯೂ ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವೇ ಇಲ್ಲವೆಂದು ಶಾಸಕರು ಹೇಳಿದರು.

Share This Article
Leave a Comment