ಪುತ್ತೂರಿನಲ್ಲಿ ನ. 8ರಂದು ‘ಅಶೋಕ ಜನಮನ-2026’ ಕಾರ್ಯಕ್ರಮ

Prakhara News
1 Min Read

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವೆಂಬರ್ 8ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ‘ಅಶೋಕ ಜನಮನ-2026 ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತೀಯೊಬ್ಬರಿಗೂ ದೀಪಾವಳಿ ಉಡುಗೊರೆ ನೀಡಲಾಗುವುದು. ಈ ಬಾರಿ ತಟ್ಟೆ, ಸೀರೆ ಮತ್ತು ಬೆಡ್ ಶೀಟ್ ಗಳನ್ನು ನೀಡಲಾಗುತ್ತಿದ್ದು, ಈ ಮೂರು ಬಗೆಯ ಉಡುಗೊರೆಯಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅವಕಾಶವಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ಅಶೋಕ ಜನಮನ 202 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಟ್ರಸ್ಟ್ನ ಸದಸ್ಯರು ಗ್ರಾಮಗಳಿಗೆ ತೆರಳಿ ಪ್ರತೀ ಕುಟುಂಬಕ್ಕೂ ಆಹ್ವಾನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಾತಿ, ಧರ್ಮ, ಮತ ಭೇದವಿಲ್ಲದೆ ಎಲ್ಲರೂ ಭಾಗವಹಿಸುವ ಮೂಲಕ ಆಶೀರ್ವದಿಸಬೇಕು ಎಂದರು.

ಕಳೆದ 14 ವರ್ಷಗಳಿದ ದೀಪಾವಳಿ ಪ್ರಯುಕ್ತ ನಮ್ಮ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೇವೆ. ಸಣ್ಣ ಮಟ್ಟದಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮ ಇಂದು ಲಕ್ಷಾಂತರ ಮಂದಿ ಸೇರುವ ಕಾರ್ಯಕ್ರಮವಾಗಿ ಮೂಡಿಬರುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರ ಆಶೀರ್ವಾದ ಮತ್ತು ಸಲಹೆ ಸಹಕಾರವೇ ಕಾರ್ಯಕ್ರಮ ಯಶಶ್ವಿಯತ್ತ ಸಾಗಲು ಕಾರಣವಾಗಿದೆ ಎಂದು ಹೇಳಿದರು. ಪ್ರತೀ ವರ್ಷದಂತೆ ಈ ವರ್ಷವೂ ನಮ್ಮ ಟ್ರಸ್ಟ್ ಸದಸ್ಯರು ಗ್ರಾಮ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಗ್ರಾಮಸ್ಥರನ್ನು ಆಹ್ವಾನಿಸಲಿದ್ದಾರೆ. ಇದಕ್ಕಾಗಿ ಪ್ರತೀ ಗ್ರಾಮದಲ್ಲೂ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ಸಮಿತಿಯ ರಚನೆ:
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಸಮಿತಿಯನ್ನು ರಚನೆ ಮಾಡಲಾಗಿದ್ದು ಇದರಲ್ಲಿ ಟ್ರಸ್ಟ್ ಸದಸ್ಯರ ಜೊತೆಗೆ ಪಕ್ಷ ಭೇದ ಮರೆತು ಗ್ರಾಮಸ್ಥರನ್ನು ನೇಮಿಸಲಾಗಿದೆ. ಮಹಿಳಾ ಪ್ರಚಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಪ್ರತೀ ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚುಗಳಲ್ಲಿ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಲಾಗುವುದು. ಜಾತಿ, ಮತ, ಪಕ್ಷ, ಧರ್ಮ ಭೇದವಿಲ್ಲದೆ ಎಲ್ಲರನ್ನೊಳಗೊಂಡು ಈ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

Share This Article
Leave a Comment