ಬಂಟ್ವಾಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 139/2007ರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಅಕ್ಟೋಬರ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಅವರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ವೇಳೆ ಆರೋಪಿಯ ಪಾಸ್‌ಪೋರ್ಟ್ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



