ಕೇಪು ಉಳ್ಳಾಲ್ತಿ ದೇವಸ್ಥಾನದ ಕೋಳಿ ಅಂಕ ಪ್ರಕರಣ: ಶಾಸಕ ಅಶೋಕ್ ರೈ ಸಹಿತ 26 ಮಂದಿ ಖುಲಾಸೆ, ಕೇಸ್ ರದ್ದುಗೊಳಿಸಿದ ಹೈಕೋರ್ಟ್..!

Prakhara News
1 Min Read

ಪುತ್ತೂರು: ವಿಟ್ಲ ಸಮೀಪದ ಕೇಪು ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಸೇರಿದಂತೆ 26 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ, ಎಲ್ಲರನ್ನೂ ಖುಲಾಸೆಗೊಳಿಸಿದೆ.

2025ರ ಡಿಸೆಂಬರ್ 20 ರಂದು ಕೇಪು ಗ್ರಾಮದ ಶ್ರೀ ಉಳ್ಳಾಲ್ತಿ ದೇವಸ್ಥಾನದ ಅಂಗಳದಲ್ಲಿ ವರ್ಷಂಪ್ರತಿ ಹರಕೆ ರೂಪದಲ್ಲಿ ನಡೆಯುವ ಸಾಂಪ್ರದಾಯಿಕ ಕೋಳಿ ಅಂಕವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ದೊರೆತಿರಲಿಲ್ಲ. ಆದಾಗ್ಯೂ, ಹರಕೆ ರೂಪದ ಈ ಕೋಳಿ ಅಂಕವು ಶಾಸಕ ಅಶೋಕ್ ರೈ ಅವರ ಮುಂದಾಳುತ್ವದಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಸ್ಥಳಕ್ಕೆ ದಾಳಿ ನಡೆಸಿದ್ದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ, ಅನುಮತಿ ಇಲ್ಲದೆ ಕೋಳಿ ಅಂಕ ನಡೆಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಹಾಗೂ ಇತರ 26 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ವಿಟ್ಲ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯವು, ಆರೋಪಿಗಳ ಮೇಲಿನ ಆರೋಪಗಳನ್ನು ಖುಲಾಸೆಗೊಳಿಸಿರುವುದಲ್ಲದೆ, ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಇಡೀ ಪ್ರಕರಣವನ್ನೇ ರದ್ದುಗೊಳಿಸಿ ಆದೇಶಿಸಿದೆ.

Share This Article
Leave a Comment