ಮಂಗಳೂರು : ಕೃತಕ ಬುದ್ದಿ ಮತ್ತೆ (ಎ.ಐ) ಸಹಿತ ಆಧುನಿಕ ತಂತ್ರಜ್ಞಾನದ ಅರಿವಿನ ಕೊರತೆ ಸೈಬರ್ ಅಪರಾಧಗಳಿಗೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಸೈಬರ್ ಸುರಕ್ಷತೆಯ ತಜ್ಞರಾದ ಡಾ.ಅನಂತ ಪ್ರಭು ತಿಳಿಸಿದ್ದಾರೆ.


ಅವರು ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಮಾಧ್ಯಮ ಸಂವಾದ ಗೋಷ್ಠಿಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ, ಎ.ಐ ಸೇರಿದಂತೆ ಆಧುನಿಕ ತಂತ್ರಜ್ಞಾನದ ಸಲಕರಣೆಗಳಾದ ಕಂಪ್ಯೂಟರ್, ಇಂಟರ್ ನೆಟ್,ಮೊಬೈಲ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಹೊಂದಿರುವವರು ಇವುಗಳನ್ನು ಬಳಸುವ ಸಂದರ್ಭದಲ್ಲಿ ಸೂಕ್ತ ಮಾಹಿತಿ ಹೊಂದಿರಬೇಕಾಗಿದೆ.ಇಲ್ಲದೆ ಹೋದಲ್ಲಿ ಆ ಸಾಧನಗಳ ಮೂಲಕ ನಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು.ಇದರಿಂದ ನಾವು ಸಂಕಷ್ಟಕ್ಕೆ ಒಳಗಾಗುವ ಸಂದರ್ಭಗಳಿರುತ್ತವೆ. ಹಲವು ಸಂದರ್ಭದಲ್ಲಿ ಇದರಿಂದ ಪಾರಾಗಲು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಸಾಕಷ್ಟು ಜ್ಞಾನ ಹೊಂದಿರಬೇಕಾದ ಅಗತ್ಯವಿದೆ ಎಂದು ಸುರಕ್ಷತಾ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು.

ಮಾಧ್ಯಮ ಸಂವಾದ ಗೋಷ್ಠಿಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀ ನಿವಾಸ ನಾಯಕ್ ಇಂದಾಜೆ, ಗೋಷ್ಠಿಯ ನಿರ್ದೇಶಕ ಕಿರಣ್ ಸಿರ್ಸಿಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹರೀಶ್ಆದೂರು ಸ್ವಾಗತಿಸಿದರು, ಕೋಶಾಧಿಕಾರಿ ವಿಜಯ ಕೋಟ್ಯಾನ್ ವಂದಿಸಿದರು.




