ಚಿಕ್ಕಮಗಳೂರು : ದೇವಿರಮ್ಮ ಬೆಟ್ಟ ಹತ್ತುವಾಗ ಹೃದಯಾಘಾತ – ಧರ್ಮಸ್ಥಳ ಸಮೀಪದ ಕನ್ಯಾಡಿ ನಿವಾಸಿ ಸಾವು..!

Prakhara News
1 Min Read

ಚಿಕ್ಕಮಗಳೂರು : ಪ್ರಸಿದ್ಧ ದೇವಿರಮ್ಮ ಬೆಟ್ಟದ ಜಾತ್ರೆಯ ಸಂಭ್ರಮದ ನಡುವೆ ದುರಂತವೊಂದು ಸಂಭವಿಸಿದೆ. ಬೆಟ್ಟ ಹತ್ತುವ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ ನಿವಾಸಿ ಲಕ್ಷ್ಮಣ್ (32) ಮೃತಪಟ್ಟಿದ್ದಾರೆ.

ದೇವಿರಮ್ಮ ಬೆಟ್ಟದ ಎರಡನೇ ದಿನದ ಜಾತ್ರೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬೆಟ್ಟ ಏರುತ್ತಿದ್ದ ವೇಳೆ ಲಕ್ಷ್ಮಣ್ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತೀವ್ರ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದೇವಿರಮ್ಮ ಬೆಟ್ಟ ಹತ್ತಲು ನಿಗದಿಪಡಿಸಲಾಗಿದ್ದ ಕೊನೆಯ ದಿನದಂದೇ ಈ ದುರ್ಘಟನೆ ಸಂಭವಿಸಿದ್ದು, ಜಾತ್ರೆಗೆ ಆಗಮಿಸಿದ್ದ ಭಕ್ತರಲ್ಲಿ ಆಘಾತ ಮತ್ತು ವಿಷಾದ ಮೂಡಿಸಿದೆ.
ಬೆಟ್ಟದ ಜಾತ್ರೆಯ ಸಂಭ್ರಮದ ನಡುವೆ ಸಂಭವಿಸಿದ ಈ ಸಾವು ಸ್ಥಳೀಯರಲ್ಲಿ ಶೋಕದ ವಾತಾವರಣ ಮೂಡಿಸಿದೆ.

Share This Article
Leave a Comment