ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಮತ್ತೆ ಸಿಹಿಸುದ್ದಿ: ಸಂಚಾರ ದಂಡ ಪಾವತಿಗೆ ಶೇ. 50ರ ಷ್ಟು ರಿಯಾಯಿತಿ ಘೋಷಣೆ..!

Prakhara News
1 Min Read

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತವನ್ನು ಶೇ.50ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ಅವಕಾಶ ನೀಡಿದ್ದು, ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಈ ರಿಯಾಯಿತಿ ಅನ್ವಯವಾಗಲಿದೆ.

ರಾಜ್ಯದಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯವನ್ನು ಮತ್ತೊಮ್ಮೆ ವಿಸ್ತರಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ಬಾಕಿ ದಂಡವನ್ನು ವಾಹನ ಸವಾರರು ನಿಗದಿತ ಅವಧಿಯಲ್ಲಿ ಶೇ.50ರಷ್ಟು ಮೊತ್ತ ಪಾವತಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಈ ಮೂಲಕ ದೀರ್ಘಕಾಲದಿಂದ ಬಾಕಿ ಉಳಿದಿರುವ ದಂಡದ ಪ್ರಕರಣಗಳನ್ನು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ.

ಹೀಗಾಗಿ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ನವೆಂಬರ್ 21ರಿಂದ ಡಿಸೆಂಬರ್ 11ರೊಳಗೆ ರಿಯಾಯಿತಿ ಸೌಲಭ್ಯ ಬಳಸಿಕೊಂಡು ದಂಡ ಪಾವತಿಸಬಹುದಾಗಿದೆ.

Share This Article
Leave a Comment