ರಾಜ್ಯಮಟ್ಟದ ಸಹಕಾರ ಸಪ್ತಾಹ ಗೌರವ ಪ್ರಶಸ್ತಿಗೆಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆ

Prakhara News
1 Min Read

ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ ೭೩ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ
ಇವರು ಆಯ್ಕೆಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ೩ ದಶಗಳ ಅನುಭವ ಇರುವ ಪಿ.ಬಿ.ಹರೀಶ್ ರೈ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ, ಐನೆಕಿದು-ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಿಜಯವಾಣಿ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿದ್ದಾರೆ.
೭೩ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನ.೨೦ರಂದು ಬೆಳಗ್ಗೆ ೧೦ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

Share This Article
Leave a Comment