ಮಿನರಲ್ ವಾಟರ್ ಕಂಪನಿಗಳ ಮೇಲೆ ಆರೋಗ್ಯ ಇಲಾಖೆಯ ನಿಗಾ – ರಾಜ್ಯಾದ್ಯಂತ 112 ಫ್ಯಾಕ್ಟರಿಗಳ ತಪಾಸಣೆ: ಯು.ಟಿ. ಖಾದರ್

Prakhara News
1 Min Read

ಮಂಗಳೂರು : ರಾಜ್ಯದಲ್ಲಿ ಮಿನರಲ್ ವಾಟರ್ ಕಂಪನಿಗಳ ಗುಣಮಟ್ಟ ಹಾಗೂ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಆರೋಗ್ಯ ಇಲಾಖೆ ವತಿಯಿಂದ ವಿಶೇಷ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ರಾಜ್ಯಾದ್ಯಂತ ಒಟ್ಟು 112 ನೀರಿನ ಫ್ಯಾಕ್ಟರಿಗಳನ್ನು ಪರಿಶೀಲಿಸಲಾಗುತ್ತಿದ್ದು, ಈ ಪೈಕಿ 60 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಬಂದ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಸ್ಲೆರಿ ಬ್ರ್ಯಾಂಡ್ ವಿರುದ್ಧ ದೆಹಲಿಯಲ್ಲಿ ದಾಳಿ ನಡೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿನ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದರು.

ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಪೂರೈಕೆಯಾಗುವ ಕುಡಿಯುವ ನೀರನ್ನೂ ರಾಜ್ಯದಲ್ಲಿಯೇ ಗುಣಮಟ್ಟದ ಪರೀಕ್ಷೆಗೆ ಒಳಪಡಿಸಲಾಗುವುದು. ಜನರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ನೀರಿನ ಗುಣಮಟ್ಟದಲ್ಲಿ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಕಂಪನಿಗಳ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

Share This Article
Leave a Comment